ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಗೋವಾ ಬಿಜೆಪಿ ಸರ್ಕಾರದಿಂದ ಶಾಕ್‌

0
510

ಸನ್ಮಾರ್ಗ ವಾರ್ತೆ

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಗೋವಾ ಬಿಜೆಪಿ ಸರ್ಕಾರ ಶಾಕ್‌ ಕೊಟ್ಟಿದೆ. ಗೋವಾದಲ್ಲಿಯೂ ಇಂಧನ ದರ ಏರಿಕೆ ಮಾಡಿ ಅಲ್ಲಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದ್ದು, ಶನಿವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ.

ಗೋವಾ ಸರ್ಕಾರದ ಅಧೀನ ಕಾರ್ಯದರ್ಶಿ (ಹಣಕಾಸು) ಪ್ರಣಬ್ ಜಿ ಭಟ್ ಅವರು ಶುಕ್ರವಾರ ಪರಿಷ್ಕೃತ ದರ ಅಧಿಸೂಚನೆ ಹೊರಡಿಸಿದ್ದಾರೆ. ಅದರಂತೆ, ಗೋವಾದಲ್ಲಿ ಪೆಟ್ರೋಲ್ ಬೆಲೆ 1 ರೂಪಾಯಿ, ಡೀಸೆಲ್ 36 ಪೈಸೆ ಏರಿಕೆಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 1 ಮತ್ತು 36 ಪೈಸೆಗಳಷ್ಟು ಹೆಚ್ಚಳ ಮಾಡಲಾಗಿದೆ. ಹೊಸ ದರದೊಂದಿಗೆ ಗೋವಾರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.40 ರೂ ಆಗಿದ್ದು, ಡೀಸೆಲ್‌ಗೆ 88.26 ರೂ.ಗೆ ಏರಿಕೆಯಾಗಿದೆ.

ಇಂಧನ ದರ ಏರಿಕೆ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ, ಕಾಂಗ್ರೆಸ್ ನಾಯಕ ಯೂರಿ ಅಲೆಮಾವೊ, “ಗೋವಾ ಸರ್ಕಾರ,  ‘ಸಂವೇದನಾಶೀಲ ರಹಿತ ಸರ್ಕಾರ’ವಾಗಿದೆ. ಬೆಲೆ ಏರಿಕೆ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿದೆ. ಅದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ಸಮಯದಲ್ಲಿ ಗೋವಾದಲ್ಲಿ ಬಿಜೆಪಿ ಸರ್ಕಾರವೇ ಇಂಧನ ದರ ಏರಿಕೆ ಮಾಡಿದೆ. ಇದು, ಇಲ್ಲಿನ ಬಿಜೆಪಿ ನಾಯಕರನ್ನು ಪೇಚಿಗೆ ಸಿಲುಕಿಸಿದೆ.