ಸನ್ಮಾರ್ಗ ವಾರ್ತೆ
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೊಸದಾಗಿ ಪತ್ತೆಯಾಗಿರುವ ಆಸ್ತಿಯನ್ನು ಜಪ್ತಿ ಮಾಡಲು ಸರ್ಕಾರದ ವಿಳಂಬದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟಿಗೆ ರಿಟ್ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜನಾರ್ದನರೆಡ್ಡಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರಕ್ಕೆ ಉತ್ತರಿಸಲು ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ರಾಜ್ಯ ಗೃಹ ಇಲಾಖೆ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದು, ಈ ವಿಷಯವನ್ನು ಸರ್ಕಾರದ ಪರ ವಕೀಲರು ಹೈಕೋರ್ಟಿಗೆ ಮಾಹಿತಿ ನೀಡಿದ್ದಾರೆ. “ಜೈಲಿನಲ್ಲಿ ನಾಲ್ಕೈದು ಅಡಿ ಜಾಗದಲ್ಲಿದ್ದವನು ನಾನು, ಆಸ್ತಿ ಜಪ್ತಿಗೆ ಹೆದರುವ ಪ್ರಶ್ನೆಯೇ ಇಲ್ಲ” ಎಂದು ಜನಾರ್ದನ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.












