ಸನ್ಮಾರ್ಗ ವಾರ್ತೆ
ಉತ್ತರ ಪ್ರದೇಶ: ಕಳೆದ ವಾರ, ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕಾತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ, ಉದ್ಯಮಿ ಮತ್ತು ರಾಜಕಾರಣಿ, ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಕೆ.ಎಲ್. ಪಟೇಲ್ ಸೇರಿದಂತೆ 11 ಜನರನ್ನು ಬಂಧಿಸಿದ್ದ ಐಪಿಎಸ್ ಅಧಿಕಾರಿಯೊಬ್ಬರನ್ನು ಯೋಗಿ ಅಸದಿತ್ಯನಾಥ್ ಸರಕಾರ ದಿಢೀರ್ ವರ್ಗಾವಣೆಗೊಳಿಸಿರುವುದು ಇದೀಗ ವಿವಾದಕ್ಕೆ ಗುರಿಯಾಗಿದೆ.
ಈ ಬಗ್ಗೆ ಆದಿತ್ಯನಾಥ್ ಸರಕಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ನೇಮಕಾತಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಿದ್ದಕ್ಕಾಗಿ ಐಪಿಎಸ್ ಅಧಿಕಾರಿ ಸತ್ಯಾರ್ಥ್ ಅನಿರುದ್ಧ ಪಂಕಜ್ರವರನ್ನು ವರ್ಗಾಯಿಸುವ ಮೂಲಕ ಯೋಗಿ ಸರಕಾರ ಶಿಕ್ಷೆಗೊಳಪಡಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಇದಲ್ಲದೇ, ವರ್ಗಾವಣೆಯ ನಂತರ ಅವರಿಗೆ ಯಾವುದೇ ಸ್ಥಾನವನ್ನು ನೀಡಿಲ್ಲ. ಅಲ್ಲದೇ, ಭದ್ರತಾ ಸಿಬ್ಬಂದಿಯೊಬ್ಬರಿಗೆ ಕೊರೋನ ದೃಢಪಟ್ಟಿದ್ದರಿಂದಾಗಿ ಸತ್ಯಾರ್ಥ್ ಅನಿರುದ್ಧ ಅವರನ್ನು ಕೊರೋನ ವಾರ್ಡ್ಗೆ ದಾಖಲಿಸಲಾಗಿದೆ. ಅವರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












