ಸನ್ಮಾರ್ಗ ವಾರ್ತೆ
ನವದೆಹಲಿ: ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದು, ಬಳಿಕ ಉಂಟಾದ ಹಿಂಸಾಚಾರ ಕ್ಕೆ ಸಂಬಂಧಪಟ್ಟಂತೆ ನಾಳೆಯೊಳಗೆ ಅಕ್ಟೋಬರ್ 8 ಘಟನೆಯ ಸ್ಥಿತಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಇಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ಈ ಹಿಂಸಾಚಾರದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು, ಅದರಲ್ಲಿ ನಾಲ್ವರು ರೈತರೇ ಆಗಿದ್ದಾರೆ. ಪ್ರಕರಣದ ವಿಚಾರಣೆ ಇಂದು ನಡೆಸಿರುವ ಸುಪ್ರೀಂ ಕೋರ್ಟ್, ನಾಳೆಯೊಳಗೆ ಕೋರ್ಟ್ಗೆ ಘಟನೆಯ ಸ್ಥಿತಿ ವರದಿ ಸಲ್ಲಿಸಬೇಕು. ಅದರಲ್ಲಿ ಪ್ರಕರಣದ ಆರೋಪಿಗಳ ಬಗ್ಗೆ ವಿವರವಿರಬೇಕು. ಒಂದು ವೇಳೆ ಆರೋಪಿಗಳನ್ನು ಬಂಧಿಸಿದ್ದರೆ ಅದರ ಉಲ್ಲೇಖವೂ ಇರಬೇಕು. ಅದರ ಜತೆ, ಘಟನೆಯಿಂದ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿರುವ ಮೃತ ರೈತ ಲವಪ್ರೀತ್ ಸಿಂಗ್ರ ತಾಯಿಗೆ ನೀಡಲಾಗಿರುವ ವೈದ್ಯಕೀಯ ನೆರವು ಒಳಗೊಂಡಂತೆ ಸಮಗ್ರ ಮಾಹಿತಿ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ.












