ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

0
386

ಸನ್ಮಾರ್ಗ ವಾರ್ತೆ

ನವದೆಹಲಿ: ಯುಎಪಿಎಯಡಿ ಬಂಧಿತ ಉಮರ್ ಖಾಲಿದ್, ಶರ್ಜಿಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು ಅವರಿಗೆ ಜಾಮೀನು ನಿರಾಕರಿಸಿದೆ.

ಆದರೆ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಗೆ ಸುಪ್ರೀಂಕೋರ್ಟ್ 12 ಷರತ್ತುಗಳೊಂದಿಗೆ ಜಾಮೀನು ನೀಡಿದೆ.

ಕಾನೂನು ಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ (UAPA) ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಆರೋಪಿಗಳು ಐದು ವರ್ಷಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದಾರೆ.

2020 ಫೆ.23 ರಿಂದ ಫೆ.29 ರವರೆಗೆ ನಡೆದ ಗಲಭೆಯಲ್ಲಿ 53 ಮಂದಿ ಮೃತಪಟ್ಟಿದ್ದರು. ಈ ಗಲಭೆಗೆ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಪ್ರಚೋದನೆ ನೀಡಿದ್ದೇ ಕಾರಣ ಎಂದು ದೆಹಲಿ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರು.