ಸ್ಟ್ಯಾಂಡ್-‌ಅಪ್ ಕಮೆಡಿಯನ್ ಮುನವ್ವರ್ ಫಾರೂಕಿ‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

0
402

ಸನ್ಮಾರ್ಗ ವಾರ್ತೆ

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ಪ್ರಕರಣವೊಂದರಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಜನವರಿ 28 ರಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಫಾರೂಕಿ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದರು.

ಫಾರೂಕಿ ರಿಟ್ ಅರ್ಜಿ ಮತ್ತು ಎಸ್‌ಎಲ್‌ಪಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಆರ್.‌ಎಫ್ ನಾರಿಮನ್ ಮತ್ತು ಬಿ.ಆರ್ ಗವಾಯಿ ಅವರ ನ್ಯಾಯಪೀಠವು ಈ ಎರಡೂ ಅರ್ಜಿಗಳಲ್ಲಿ ವಿಚಾರಣೆ ನಡೆಸಿದ ಬಳಿಕ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.