ತೀಸ್ತಾ ಸೆಟಲ್ವಾಡ್ ಗೆ ಸುಪ್ರೀಂಕೋರ್ಟ್ ಜಾಮೀನು

0
241

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: 2002 ರಲ್ಲಿ ಗುಜರಾತ್ ಗಲಭೆಗೆ ಸಂಬಂಧಿಸಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ ಎಂದು ANI ವರದಿ ಮಾಡಿದೆ.

ತೀಸ್ತಾ ಸೆಟಲ್ವಾಡ್ ರನ್ನು ಕೂಡಲೇ ಶರಣಾಗುವಂತೆ ಆದೇಶ ನೀಡಿ, ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ನ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು ಎಂದೂ ಈ ವೇಳೆ ನ್ಯಾಯಾಧೀಶರು ಹೇಳಿದ್ದಾರೆ.