ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌‌ರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

0
494

ಸನ್ಮಾರ್ಗ ವಾರ್ತೆ

ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 26 ರಿಂದ ಬಂಧನದಲ್ಲಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌‌ರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

ಈ ವಿಷಯವನ್ನು ಹೈಕೋರ್ಟ್ ಪರಿಗಣಿಸುವವರೆಗೆ ತನ್ನ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ಆದೇಶಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ತೀರ್ಪು ನೀಡಿದೆ.