ತಮಿಳುನಾಡು ರಾಜ್ಯಪಾಲರಿಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

0
421

ಸನ್ಮಾರ್ಗ ವಾರ್ತೆ

ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ತನ್ನ ಬಳಿ ಇಟ್ಟುಕೊಂಡದ್ದಲ್ಲದೆ ಬಳಿಕ ರಾಷ್ಟ್ರಪತಿಗೆ ಕಳುಹಿಸಿಕೊಟ್ಟ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರಿಗೆ ಸುಪ್ರೀಂ ಕೋರ್ಟು ತಪರಾಕಿ ನೀಡಿದೆ. ಇವರು ಸಹಿತ ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಆಗಾಗ ಸರಕಾರಕ್ಕೆ ಇಂತಹ ತೊಂದರೆಯನ್ನು ಮಾಡುತ್ತಲೇ ಬಂದಿದ್ದಾರೆ. ಕರ್ನಾಟಕದಲ್ಲೂ ಇಂತಹ ತೊಂದರೆಗಳು ಎದುರಾಗುತ್ತಲೇ ಇವೆ. ಇದೀಗ ಸುಪ್ರೀಂ ಕೋರ್ಟ್ ರಾಜ್ಯಪಾಲರುಗಳ ಇಂತಹ ನಡೆಗೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆಯಲ್ಲದೆ ಅವರಿಗೆ ಲಗಾಮು ಹಾಕಿದೆ.

ರಾಜ್ಯಪಾಲರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ರಾಷ್ಟ್ರಪತಿಯವರ ಅಂಗೀಕಾರಕ್ಕಾಗಿ 10 ಮಸೂದೆಗಳನ್ನು ಕಾಪಿಟ್ಟುಕೊಂಡದ್ದು ಕಾನೂನುಬಾಹಿರವಾಗಿದೆ. ಯಾವುದೇ ಮಸೂದೆಯ ಬಗ್ಗೆ ಮೂರು ತಿಂಗಳೊಳಗೆ ತೀರ್ಮಾನ ತೆಗೆದುಕೊಳ್ಳಲೇಬೇಕು ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.