ಉದಯಪುರ್ ಫೈಲ್ಸ್ ಸಿನಿಮಾ ಬಿಡುಗಡೆಗೆ ತಡೆ ಹೇರಲು ನಿರಾಕರಿಸಿದ ಸುಪ್ರೀಂ ಕೋರ್ಟ್

0
344

ಸನ್ಮಾರ್ಗ ವಾರ್ತೆ

ಉದಯಪುರ್ ಪೈಲ್ಸ್ ಸಿನಿಮಾ ಬಿಡುಗಡೆಗೆ ತಡೆ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮಾತ್ರ ಅಲ್ಲ ಈ ಅರ್ಜಿಯನ್ನು ತಕ್ಷಣ ವಿಚಾರಣೆಗೆ ಎತ್ತಿಕೊಳ್ಳಬೇಕೆಂಬ ಬೇಡಿಕೆಯನ್ನೂ ತಿರಸ್ಕರಿಸಿದೆ. ಟಿವಿ ಚರ್ಚೆಯೊಂದರ ವೇಳೆ ಬಿಜೆಪಿ ನಾಯಕಿ ನೂಪುರ್ ಶರ್ಮ ಅವರು ಪ್ರವಾದಿ ಮುಹಮ್ಮದರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಎಂಬ ಟೈಲರ್ ನನ್ನು ಇಬ್ಬರು ಮುಸ್ಲಿಂ ಯುವಕರು ಹತ್ಯೆ ಮಾಡಿದ್ದರು. ಈ ಘಟನೆಯನ್ನು ಆದರಿಸಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಜಾವೇದ್ ಎಂಬವ ಸುಪ್ರೀಂ ಕೋರ್ಟ್ ನಲ್ಲಿ ಈ ಅರ್ಜಿ ಸಲ್ಲಿಸಿದ್ದ. ಈ ಸಿನಿಮಾ ಬಿಡುಗಡೆಯಾಗುವುದರಿಂದ ನ್ಯಾಯಯುತ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದ.

ಈ ಸಿನಿಮಾವು ಪ್ರಕರಣದ ಒಂದು ಮುಖವನ್ನು ಮಾತ್ರ ತೋರಿಸುತ್ತದೆ, ಅಲ್ಲದೆ ಈ ಪ್ರಕರಣದ ಆರೋಪಿಗಳಿಗೆ ಇನ್ನೂ ಶಿಕ್ಷೆ ಆಗಿಲ್ಲದೆ ಇರುವುದರಿಂದ ಈ ಸಿನಿಮಾವು ವಿಚಾರಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಅರ್ಜಿದಾರ ಮನವಿ ಮಾಡಿದ್ದ.

ಇದೇ ವೇಳೆ ಈ ಸಿನಿಮಾ ಬಿಡುಗಡೆಯನ್ನು ತಡೆಯಬೇಕೆಂದು ಕೋರಿ ದೆಹಲಿ ಹೈಕೋರ್ಟಿಗೆ ಜಮೀಯತೆ ಉಲಮಾಯೆ ಹಿಂದ್ ಮನವಿ ಸಲ್ಲಿಸಿದೆ. ಆದರೆ, ಈ ಸಿನಿಮಾದಿಂದ ನಿರ್ದಿಷ್ಟ ದೃಶ್ಯಗಳನ್ನು ತೆರವುಗೊಳಿಸಲಾಗಿದೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಷನ್ ನ್ಯಾಯಾಲಯಕ್ಕೆ ತಿಳಿಸಿದೆ.