ಕೊರೋನಾ ವ್ಯಾಕ್ಸಿನ್ ವಿರುದ್ಧ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯಗಳಿಗೆ ಸೂಚನೆ

0
354

ಸನ್ಮಾರ್ಗ ವಾರ್ತೆ

ನವದೆಹಲಿ: ಕೊರೋನಾ ವಿರುದ್ಧ ದೇಶದಲ್ಲಿ ನೀಡಲಾಗುತ್ತಿರುವ ಎರಡು ವ್ಯಾಕ್ಸಿನ್‌ಗಳ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಪ್ರಕರಣಗಳನ್ನು ಪತ್ತೆ ಹಚ್ಚಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ಸಂಹಿತೆ 1860ರ ಅಡಿ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದೆ ಎಂಬುದಾಗಿ ವರದಿಯಾಗಿದೆ.

ಸುಳ್ಳು ಸುದ್ದಿಗೆ ಓಗೊಟ್ಟು ದೇಶದಾದ್ಯಂತ ವ್ಯಾಕ್ಸಿನ್ ಪಡೆಯಲು ಸ್ವತಃ ಆರೋಗ್ಯ ಕಾರ್ಯಕರ್ತರೇ ಹಿಂದೆ ಸರಿಯುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಈ ಕುರಿತು ರಾಜ್ಯ ಸರ್ಕಾರಗಳಿಗೆ ಪತ್ರ ಬರದಿರುವ ಕೇಂದ್ರ ಗೃಹ ಸಚಿವಾಲಯ ಮುಖ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ವ್ಯಾಕ್ಸಿನ್ ಸಾಮರ್ಥ್ಯ ಹೊಂದಿವೆ ಎಂದು ಸ್ವತಃ ಔಷಧಗಳ ಕುರಿತ ರಾಷ್ಟ್ರೀಯ ನಿಯಂತ್ರಣಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಆದರೂ ಇವುಗಳ ಕುರಿತು ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಹೇಳಿದರು‌.