ಸನ್ಮಾರ್ಗ ವಾರ್ತೆ
ಲಕ್ನೋ: ಅಮೆಝಾನ್ ಪ್ರೈಮ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಹಿಂದಿ ವೆಬ್ ಸೀರೀಸ್ ‘ತಾಂಡವ್’ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಲಾಗಿದ್ದು, ಈ ಬಗ್ಗೆ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.
ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ವೆಬ್ ಸೀರೀಸ್ ವಿರುದ್ಧ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
“ವೆಬ್ ಸರಣಿ ತಾಂಡವ್‌ನ ನಿರ್ಮಾಪಕ, ನಿರ್ದೇಶಕ ಮತ್ತು ಕಲಾವಿದರು ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆಯನ್ನು ಹಾಳುಮಾಡುವ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಪರಾಧ ಮಾಡಿದ್ದಾರೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟ್ವೀಟ್ ಮೂಲಕ ನಲ್ಲಿ ತಿಳಿಸಿದ್ದಾರೆ.
ವೆಬ್ ಸೀರೀಸ್‌ನ ನಿರ್ಮಾಪಕರು ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ಅಮೆಝಾನ್ ಪ್ರೈಮ್‌ನ ಅಧಿಕಾರಿಗಳ ವಿರುದ್ಧ ಲಕ್ನೋದ ಹಝರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ನಾಲ್ಕು ಪೊಲೀಸ್ ಸಿಬ್ಬಂದಿಯ ತಂಡ ತನಿಖೆಗಾಗಿ ಮುಂಬೈ ತಲುಪಿದೆ.












