ಭಾರತರತ್ನ ಕೇಳಿದ್ದು ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳಿಗೆ, ಸಿಕ್ಕಿದ್ದು ಎಲ್ ಕೆ ಅಡ್ವಾಣಿಗೆ

0
282

ಸನ್ಮಾರ್ಗ ವಾರ್ತೆ

ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಲ್ ಕೆ ಅಡ್ವಾಣಿ ಯವರಿಗೆ ‘ಭಾರತ ರತ್ನ’ ಪ್ರಕಟವಾದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಹಿರಿಯ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿಯವರಿಗೆ ಕೇಂದ್ರ ಸರ್ಕಾರವು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿದ ಬಗ್ಗೆ ಪತ್ರಕರ್ತರು ಕೇಳಿದ ವೇಳೆ ದಾವಣಗೆರೆಯ ಎಂ.ಬಿ.ಎ. ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

“ಎಲ್ ಕೆ ಅಡ್ವಾಣಿಯವರಿಗೆ ಕೊಟ್ಟಿರುವುದಕ್ಕೆ ನಾವೇನೂ ಬೇಡ ಅನ್ನುವುದಿಲ್ಲ. ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ನೀಡುವಂತೆ ಆಗ್ರಹಿಸಿ ಪತ್ರ ಬರೆದಿದ್ದೆವು” ಎಂದು ತಿಳಿಸಿದರು.

ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆದ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಏನೂ ಮಾಹಿತಿ ಬಂದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಗೊತ್ತಿಲ್ಲದ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.