”ಹಮಾರ ಬಾರಾ” ಚಲನಚಿತ್ರ ಬಿಡುಗಡೆ ತಡೆದ ಸುಪ್ರೀಂ ಕೋರ್ಟ್

0
299

ಸನ್ಮಾರ್ಗ ವಾರ್ತೆ

ನವದೆಹಲಿ: ದೇಶದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಚಿತ್ರಿಸಿರುವ ಆರೋಪವಿರುವ “ಹಮಾರ ಬಾರ” ಚಲನಚಿತ್ರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಆಕ್ಷೇಪಾರ್ಹ ದೃಶ್ಯಗಳಿಗೆ ಸಂಬಂಧಿಸಿದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಪರಿಶೀಲಿಸಿ ಮತ್ತು ಪರಿಹರಿಸುವವರೆಗೆ ‘ಹಮಾರೆ ಬಾರಾ’ ಚಲನಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಚಿತ್ರ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಈ ಚಲನಚಿತ್ರವನ್ನು ಕರ್ನಾಟಕ ಸರಕಾರ ಈಗಾಗಲೇ ರಾಜ್ಯದಲ್ಲಿ ನಿಷೇಧಿಸಿದೆ.