ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

0
384

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ಮೇಘಾಲಯ, ನಾಗಲ್ಯಾಂಡ್ ಹಾಗೂ ತ್ರಿಪುರಾ ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗದ ಮುಖ್ಯಸ್ಥರು ಇಂದು ಪ್ರಕಟಿಸಿದ್ದಾರೆ. ಪರೀಕ್ಷೆಗಳು ಮತ್ತು ಭದ್ರತಾ ಪಡೆಗಳ ಚಲನವಲನವನ್ನು ಗಮನದಲ್ಲಿಟ್ಟುಕೊಂಡು ಮೂರು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲಾಗಿದೆ.

ತಲಾ 60 ಸ್ಥಾನಗಳನ್ನು ಹೊಂದಿರುವ ಮೂರು ಅಸೆಂಬ್ಲಿಗಳ ಅವಧಿಯು ಕ್ರಮವಾಗಿ ಮಾರ್ಚ್ 12,15 ಮತ್ತು 22 ಕ್ಕೆ ಕೊನೆಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ. ತ್ರಿಪುರಾ ಚುನಾವಣೆಯು ಎರಡು ಹಂತದಲ್ಲಿ ನಡೆಯಲಿದ್ದು, ಒಂದನೇ ಹಂತವು ಫೆಬ್ರವರಿ 16 ಹಾಗೂ 2 ನೇ ಹಂತವು ಫೆಬ್ರವರಿ 27 ಕ್ಕೆ ನಿಗದಿಪಡಿಸಲಾಗಿದೆ. ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿ 27 ಹಾಗೂ ಮೇಘಾಲಯದಲ್ಲೂ ಫೆ.27 ರಂದು ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಮೂರು ರಾಜ್ಯಗಳಲ್ಲಿ 2.28 ಲಕ್ಷ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಕಳೆದ ವಾರ, ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್‌ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಮೂರು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿದ್ದರು. ಮಂಡಳಿ ಪರೀಕ್ಷೆಗಳು ಮತ್ತು ಭದ್ರತಾ ಪಡೆಗಳ ಚಲನವಲನವನ್ನು ಗಮನದಲ್ಲಿಟ್ಟುಕೊಂಡು ಮೂರು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲಾಗುತ್ತದೆ.