ನಾಳೆ (ಮೇ.9) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

0
413

ಸನ್ಮಾರ್ಗ ವಾರ್ತೆ

ಬೆಂಗಳೂರು : ಪ್ರಸಕ್ತ (2023-24) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ.

ಗುರುವಾರ ಬೆಳಿಗ್ಗೆ 10.30ಕ್ಕೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ.

ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here