ಕೇಂದ್ರ ಸರಕಾರದಿಂದ ಸರಕಾರಿ ಉದ್ಯೋಗಿಗಳಿಗೆ ಶುಭಸುದ್ದಿ: ಟ್ರಾವೆಲ್ ವೋಚರ್, ಹಬ್ಬಕ್ಕೆ ಅಡ್ವಾನ್ಸ್ ಕೊಡುಗೆ

0
579

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ,ಅ.12: ದೇಶದಲ್ಲಿ ಕೊರೋನದಿಂದುಂಟಾದ ಆರ್ಥಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕೇಂದ್ರ ಸರಕಾರ ತನ್ನ ಉದ್ಯೋಗಿಗಳಿಗೆ ಸೌಲಭ್ಯವನ್ನು ಕಲ್ಪಿಸುವುದಾಗಿ ಘೋಷಿಸಿದೆ. ಸರಕಾರಿ ಉದ್ಯೋಗಿಗಳಿಗೆ ಪ್ರಯಾಣ ವೋಚರ್, ಹಬ್ಬಕ್ಕೆ ಅಡ್ವಾನ್ಸ್ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಟ್ರಾವೆಲ್ ವೋಚರ್‌ಗಳಿಗಾಗಿ 5,675 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಉದ್ಯೋಗಿಗಳಿಗೆ ಯೋಜನೆ ಜಾರಿಗೊಳಿಸುವುದಕ್ಕಾಗಿ 1,900 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.