ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

0
294

ಸನ್ಮಾರ್ಗ ವಾರ್ತೆ

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಬರುವ ಎಲ್ಲಾ ಪ್ರಯಾಣಿಕರು 72 ಗಂಟೆಗಳಿಗಿಂತ ಒಳಗಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಪರೀಕ್ಷಾ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ್ ಪ್ರಸಾದ್ ಮಂಗಳವಾರ ಹೇಳಿದ್ದಾರೆ.

RT-PCR ಪರೀಕ್ಷಾ ಫಲಿತಾಂಶವಿಲ್ಲದೆ ಕೇರಳದಿಂದ ಆಗಮಿಸುವವರಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲು ಮತ್ತು ಕೋವಿಡ್ ಪಾಸಿಟಿವ್ ಎಂದು ಕಂಡು ಬಂದಲ್ಲಿ ಕ್ವಾರಂಟೈನ್ ನಲ್ಲಿರುವಂತೆ ತಿಳಿಸಲಾಗುವುದು. ನೆಗೆಟಿವ್ ಬಂದರೆ ಮಾತ್ರ ಅವರಿಗೆ ಮುಕ್ತವಾಗಿ ಚಲಿಸಲು ಸಾಧ್ಯ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಕೇರಳದಿಂದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳು 72 ಗಂಟೆಗಳಿಗಿಂತ ಹಳೆಯದಾದ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಕರ್ನಾಟಕ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ ಒಂದು ವಾರದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ನಿರ್ಧಾರಕ್ಕೆ ಬಂದಿದೆ.