ಉತ್ತರ ಪ್ರದೇಶ: ಮದರಸ ಆ್ಯಕ್ಟ್ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಮ್ ತಡೆ

0
181

ಸನ್ಮಾರ್ಗ ವಾರ್ತೆ

ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ 2004′ ಅಸಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್ ಮಾರ್ಚ್ 22 ರಂದು ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಏಪ್ರಿಲ್ 5) ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ. ಹೈಕೋರ್ಟ್ ಈ ಕಾಯ್ದೆಯ ನಿಬಂಧನೆಗಳನ್ನು ತಪ್ಪಾಗಿ ಅರ್ಥ ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ಹೈಕೋರ್ಟಿನ ಈ ತೀರ್ಪಿನಿಂದ ಸುಮಾರು 17 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ ಎಂದು ಸುಪ್ರೀಂ ತಡೆಯಾಜ್ಞೆ ನೀಡಿದೆ. ಈ ಕಾಯಿದೆಯು ಯಾವುದೇ ಧಾರ್ಮಿಕ ಸೂಚನೆಗಳನ್ನು ಒದಗಿಸುವುದಿಲ್ಲ. ಮದರಸಾದ ಮಂಡಳಿಯ ಸ್ಥಾಪನೆಯು ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ ಎಂಬ ಹೈಕೋರ್ಟ್‌ನ ಹೇಳಿಕೆ ಬಗ್ಗೆ ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.