ಸನ್ಮಾರ್ಗ ವಾರ್ತೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕೃತವಾಗಿ ರಚನೆಗೊಂಡಿದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೊತೆ ಎಂಟು ಮಂದಿ ಹಿರಿಯ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ನೂತನ ಮಂತ್ರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ರಾಮಲಿಂಗ ರೆಡ್ಡಿ, ಕೆಜೆ ಜಾರ್ಜ್, ಸತೀಶ್ ಜಾರಕಿಹೊಳಿ ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉಳ್ಳಾಲ ಕ್ಷೇತ್ರದ ಶಾಸಕ ಯು ಟಿ ಕಾದರ್ ಅವರು ೮ ಮಂದಿ ಸಚಿವರಲ್ಲಿ ಒಬ್ಬರಾಗುತ್ತಾರೆ ಎಂಬ ನಿರೀಕ್ಷೆ ಕರಾವಳಿಯಲ್ಲಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರು ಸಚಿವರಾಗುವ ಬಗ್ಗೆ ಚರ್ಚಿಸಲಾಗುತ್ತಿತ್ತು. ಅವರಿಲ್ಲದ ಪ್ರಮಾಣ ವಚನದ ಬಗ್ಗೆ ನಿರಾಶೆಯೂ ವ್ಯಕ್ತವಾಗಿತ್ತು. ಇದೀಗ ಈ ನಿರೀಕ್ಷೆಯನ್ನು ಸಚಿವ ಸಂಪುಟದ ವಿಸ್ತರಣೆಗೆ ಅಭಿಮಾನಿಗಳು ಮುಂದೂಡಿದ್ದಾರೆ.












