ಯುಎಇ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನ

0
134

ಸನ್ಮಾರ್ಗ ವಾರ್ತೆ

ಅಬುಧಾಬಿ: ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್‌ರವರು ಶುಕ್ರವಾರ, ಮೇ 13 ರಂದು ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

“ಯುಎಇ ಅಧ್ಯಕ್ಷರಾದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಗ್ಗೆ ತಿಳಿಸಿದ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಯುಎಇ, ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರ ಮತ್ತು ಪ್ರಪಂಚದ ಜನರಿಗೆ ಸಂತಾಪ ವ್ಯಕ್ತಪಡಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಯುಎಇ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರರಾಗಿ ನವೆಂಬರ್ 3, 2004 ರಿಂದ ಸೇವೆ ಸಲ್ಲಿಸಿದ್ದರು.