ಸನ್ಮಾರ್ಗ ವಾರ್ತೆ
ಉಳ್ಳಾಲ: ಎಸ್ಐಓ ಮತ್ತು ಜಿಐಓ ಸಹಯೋಗದೊಂದಿಗೆ ಎಸ್ಎಸ್ಎಲ್ಸಿಯಲ್ಲಿ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಸೆಪ್ಟೆಂಬರ್ 4 ರಂದು ಉಳ್ಳಾಲದ ಕಾರುಣ್ಯ ಸದನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವು ಜಿಐಓ ಕಾರ್ಯಕರ್ತರ ಸಮೂಹ ಗೀತೆಯೊಂದಿಗೆ ಪ್ರಾರಂಭವಾಯಿತು. ಎಸ್ಐಒ ಮಂಗಳೂರು ನಗರ ಅಧ್ಯಕ್ಷರಾದ ಸಲ್ಮಾನ್ ಮುಖ್ಯ ಭಾಷಣ ನೀಡಿದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮಿ ಪ್ರಸಾದ್ ರೈ ಉಪಸ್ಥಿತರಿದ್ದರು. ತುಳುವಿನಲ್ಲಿ ಎಂ.ಎ.ಯಲ್ಲಿ ತೇರ್ಗಡೆಯಾದ ಸಾಧನೆಗಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಎಸ್ಐಒ ಉಳ್ಳಾಲ ಘಟಕದ ಸದಸ್ಯರಾದ ಮುಷರಫ್, ವೃತ್ತಿ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಮತ್ತು JIH ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಝೀನತ್ ಹಾಸನ್, ಉಳ್ಲಾಲ ಸದ್ಭಾವನಾ ವೇದಿಕೆ ಅಧ್ಯಕ್ಷರಾದ ಪ್ರಸಾದ್ ರೈ ಕಲ್ಲಿಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಿಎ ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಧ್ಯಾಪಕ ಡಾ.ಮುಹಮ್ಮದ್ ಮುಬೀನ್ರವರು ಅಧ್ಯಕ್ಷೀಯ ಭಾಷಣ ಮಾಡಿದರು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು. ವಿದ್ಯಾರ್ಥಿಗಳು, ಪೋಷಕರು ಮತ್ತು ಎಸ್ಐಒ ಮತ್ತು ಜಿಐಓ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


















