ಉತ್ತರಾಖಂಡ ಬಿಜೆಪಿಯಲ್ಲಿ ಭಿನ್ನಮತ: ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

0
493

ಡೆಹ್ರಾಡೂನ್: ಉತ್ತರಾಖಂಡದ ಆಡಳಿತದಲ್ಲಿರುಬ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ತಲೆದೋರಿದ ಬೆನ್ನಲ್ಲೇ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

ಮಾರ್ಚ್ 7 ರಂದು ಗೈರ್ಸೇನ್‌ನಲ್ಲಿ ಬಜೆಟ್ ಅಧಿವೇಶನದ ಸಮಯದಲ್ಲಿ ಬಿಜೆಪಿ ದಿಢೀರ್‌ ಕೋರ್ ಕಮಿಟಿ ಸಭೆ ನಡೆಸಿದ್ದು ಸರ್ಕಾರದಲ್ಲಿ ಮಹತ್ವದ ಬದಲಾವಣೆಯ ಸುಳಿವು ನೀಡಿತ್ತು. ಈ ಬೆನ್ನಲ್ಲೇ ತ್ರಿವೇಂದ್ರ ಸಿಂಗ್ ರಾವತ್‌ ಮಾರ್ಚ್ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ಅಧಿಕಾರಾವಧಿ ಪೂರ್ಣಗೊಳಿಸುವುದಕ್ಕೆ ಇನ್ನೂ ಒಂದು ವರ್ಷ ಬಾಕಿ ಇರುವಾಗ ನಾಯಕತ್ವದ ಬದಲಾವಣೆಯಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿ ಶಾಸಕರು ತ್ರಿವೇಂದ್ರ ಸಿಂಗ್ ರಾವತ್ ಅವರ ಆಡಳಿತ ಶೈಲಿಯ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಮಾರ್ಚ್ 8 ರಂದು ದೆಹಲಿಗೆ ಭೇಟಿ ನೀಡಿದ್ದ ರಾವತ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. 2017 ರಲ್ಲಿ ಸಂಪೂರ್ಣ ಬಹುಮತದೊಂದಿಗೆ ಆಡಳಿತಕ್ಕೇರಿದ್ದ ಬಿಜೆಪಿ 69 ಸಂಖ್ಯಾಬಲ ಇರುವ ವಿಧಾನಸಭೆಯಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು.