ಉತ್ತರಾಖಂಡ ಸ್ಥಳೀಯ ಮಸೀದಿ ಕೆಡವಲು ಪ್ರತಿಭಟನೆ; ಹಿಂಸಾಚಾರ, ಕಲ್ಲು ತೂರಾಟ

0
111

ಸನ್ಮಾರ್ಗ ವಾರ್ತೆ

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಗುರುವಾರ ನಡೆದ ಪ್ರತಿಭಟನೆ ವೇಳೆ ಸ್ಥಳೀಯ ಮಸೀದಿಯ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಗುಂಪೊಂದು ನಡೆಸಿದ ಪ್ರತಿಭಟನೆ ಉದ್ವಿಗ್ನತೆ ಪಡೆದಿದ್ದು, ಪೋಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ.

ಸ್ನೇಕಟ್ ಸನಾತನ ಧರ್ಮದ ಪಾಲ್ಶಕ್ ಸಿಂಗ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಮಸೀದಿಯ ಕಟ್ಟಡ ಕಾನೂನು ಬಾಹಿರವಾಗಿದ್ದು, ಮಸೀದಿಯನ್ನು ಕೆಡವಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭ ಉದ್ವಿಗ್ನತೆಯನ್ನು ನಿಯಂತ್ರಿಸಲು ಪೊಲೀಸರು ಹಸ್ತಕ್ಷೇಪ ಮಾಡಿದಾಗ ಈ ಘಟನೆ ಸಂಭವಿಸಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಪ್ರತಿಭಟನಾ ಮಾರ್ಗವನ್ನು ಮೊದಲೇ ನಿರ್ಧರಿಸಲಾಗಿದ್ದು, ಸಾರ್ವಜನಿಕದ ದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಆದರೆ, ಪ್ರತಿಭಟನಾಕಾರರು ಮಸೀದಿಯ ಸಮೀಪಕ್ಕೆ ಹೋಗಲು ಸಾಧ್ಯವಾಗದ ಕಾರಣ ಆಕ್ರೋಶಗೊಂಡರು” ಉತ್ತರಕಾಶಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅಮಿತ್ ಶ್ರೀವಾಸ್ತವ ಅವರು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಮಸೀದಿಯಯ ಹತ್ತಿರ ಹೋಗಲು ಬ್ಯಾರಿಕೇಡ್‌ಗಳನ್ನು ತೆರೆಯಬೇಕೆಂದು ಒತ್ತಾಯಿಸಿದರು. ಆದರೆ, ಪೊಲೀಸರು ಅವರನ್ನು ತಡೆದಾಗ ಪ್ರತಿಭಟನಾಕಾರರು ಆಕ್ರೋಶಗೊಂಡು ಕಲ್ಲು ತೂರಾಟ ಆರಂಭಿಸಿದ್ದು, ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತು ಎಂದು ಎಸ್‌ಪಿ ಅಮಿತ್ ಶ್ರೀವಾಸ್ತವ ವಿವರಿಸಿದರು.

ಮಸೀದಿಯನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಆದರೆ, ಮಸೀದಿಯನ್ನು ಕಾನೂನುಬದ್ದವಾಗಿ ನಿರ್ಮಿಸಲಾಗಿದ್ದು, ಭೂಮಿಯು ಮುಸ್ಲಿಂ ಸಮುದಾಯದ ವ್ಯಕ್ತಿಯ ಒಡೆತನದಲ್ಲಿ ನೋಂದಾಯಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.