ಉತ್ತರಾಖಂಡ ಹಿಮಸ್ಫೋಟ| ವದಂತಿಗಳಿಗೆ ಕಿವಿಗೊಡಬೇಡಿ: ಸಾಮಾಜಿಕ ಜಾಲತಾಣದ ಚರ್ಚೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ರಾವತ್

0
316

ಸನ್ಮಾರ್ಗ ವಾರ್ತೆ

ಉತ್ತರಾಖಂಡ: ಹಿಮಸ್ಫೋಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರದ ಕುರಿತು ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅಸಮಾಧಾನ ವ್ಯಕ್ತಪಡಿಸಿದರು.

ಜೋಶಿಮಠದಲ್ಲಿ ನೀರಿನ ಮಟ್ಟ ಏರಿಕೆಯ ಬಗ್ಗೆ ಕೆಲವು ವ್ಯಕ್ತಿಗಳು ದಾರಿತಪ್ಪಿಸುವ ಮತ್ತು ಸತ್ಯರಹಿತ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿದ್ದಾರೆ. ಅಂತಹ ವದಂತಿಗಳನ್ನು ನಿರ್ಲಕ್ಷಿಸುವಂತೆ ನಾನು ಪ್ರತಿಯೊಬ್ಬರನ್ನು ವಿನಂತಿಸುತ್ತೇನೆ ಮತ್ತು ವಿಶ್ವಾಸಾರ್ಹ ಮೂಲಗಳ ಸುದ್ದಿಗಳನ್ನು ಮಾತ್ರ ನಂಬುವಂತೆ ಕೋರಿ ಎಂದು ರಾವತ್ ಟ್ವೀಟ್ ಮಾಡಿದ್ದಾರೆ.

ಭಾನುವಾರ ಸಂಭವಿಸಿದ ಭೀಕರ ಹಿಮನದಿ ಸ್ಫೋಟದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ರಾವತ್, ಹಿಮ ಸ್ಫೋಟಕ್ಕೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ ಎಂದು ಹೇಳಿದ್ದು, ರಕ್ಷಣಾ ಕಾರ್ಯಾಚರಣೆ, ಜನರ ಜೀವ ಉಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಹೈಡ್ರೋಪವರ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದ ಸಾಕಷ್ಟು ನೌಕರರು ಪ್ರವಾಹದಲ್ಲಿ ನಾಪತ್ತೆಯಾಗಿದ್ದಾರೆ. ಶೋಧ ನಡೆಸುವುದಕ್ಕಾಗಿ ಶ್ವಾನ ದಳವನ್ನೂ ನಿಯೋಜಿಸಲಾಗಿದೆ. ಚಮೋಲಿಯ ತಪೋವನ ಅಣೆಕಟ್ಟಿನ ಬಳಿ ಶ್ವಾನ ದಳದ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದ್ದು, ನೂರಾರು ಇಂಡೊ–ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿಗಳು ಶೋಧಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದರು.