ವಕ್ಫ್ ತಿದ್ದುಪಡಿ ಮಸೂದೆ: ಕೇರಳ ವಿಧಾನಸಭೆ ನಿರ್ಣಯ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು – ಸುರೇಶ್ ಗೋಪಿ

0
1504

ಸನ್ಮಾರ್ಗ ವಾರ್ತೆ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರದ ಬೆನ್ನಲ್ಲೇ, ಕೇರಳ ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಅರಬ್ಬಿ ಸಮುದ್ರಕ್ಕೆ ಎಸೆಯಬೇಕೆಂದು ಕೇಂದ್ರ ಸಚಿವ ಸುರೇಶ್ ಗೋಪಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ, ಸಿಪಿಎಂ ಸಂಸದ ಕೆ. ರಾಧಾಕೃಷ್ಣನ್ ಅವರ ಭಾಷಣಕ್ಕೆ ಪ್ರತಿಕ್ರಿಯಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

ರಾಧಾಕೃಷ್ಣನ್ ಅವರು ವಕ್ಫ್ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ, ದೇವಸ್ವಂ ಮಂಡಳಿಗೆ ಸಂಬಂಧಿಸಿದ 1987ರ ಮುಷ್ಕರದ ಬಗ್ಗೆ ಉಲ್ಲೇಖಿಸಿದರು. ಈ ವೇಳೆ, ಸುರೇಶ್ ಗೋಪಿ ಅವರ ಹೆಸರನ್ನೂ ಪ್ರಸ್ತಾಪಿಸಿದರು. ಇದಕ್ಕೆ ಗರಂ ಆದ ಸುರೇಶ್ ಗೋಪಿ, “ಕೇರಳ ವಿಧಾನಸಭೆಯ ನಿರ್ಣಯವನ್ನು ಅರಬ್ಬಿ ಸಮುದ್ರದಲ್ಲಿ ಮುಳುಗಿಸಬೇಕು” ಎಂದು ಕಿಡಿಕಾರಿದರು.

ಇದೇ ವೇಳೆ, ಸಂಸದ ಕೆ.ಸಿ. ವೇಣುಗೋಪಾಲ್, ವಕ್ಫ್ ತಿದ್ದುಪಡಿ ಮಸೂದೆಯ ಮೂಲಕ ಕೇಂದ್ರ ಸರ್ಕಾರ ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು. ಆದರೆ, ಮಸೂದೆ ಅಲ್ಪಸಂಖ್ಯಾತರ ವಿರುದ್ಧವಲ್ಲ ಎಂಬ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹೇಳಿಕೆ ಹೊಸ ವಾಗ್ವಾದಕ್ಕೆ ಕಾರಣವಾಗಿದೆ.