ಸನ್ಮಾರ್ಗ ವಾರ್ತೆ
ವಾಸ್ತವ್ಯದ ಅವಧಿ ಮುಗಿದ ನಂತರವೂ ದೇಶದಲ್ಲಿ ಉಳಿಯುವ ಹಜ್ ಮತ್ತು ಉಮ್ರಾ ಯಾತ್ರಿಕರ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಲು ವಿಫಲವಾದ ಸೇವಾ ಕಂಪನಿಗಳು ಮತ್ತು ಸಂಸ್ಥೆಗಳಿಗೆ ಒಂದು ಲಕ್ಷ ರಿಯಾಲ್ ವರೆಗೆ ದಂಡ ವಿಧಿಸಲಾಗುವುದು ಎಂದು ಸೌದಿ ಅರೇಬಿಯಾ ಎಚ್ಚರಿಸಿದೆ.
ನಿಗದಿತ ಅವಧಿ ಮುಗಿದ ನಂತರವೂ ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಯಾತ್ರಿಕರ ವಿವರಗಳನ್ನು ವರದಿ ಮಾಡುವಲ್ಲಿ ವಿಳಂಬ ಮಾಡುವ ಸಂಸ್ಥೆಗಳಿಗೆ ಈ ದಂಡ ಅನ್ವಯಿಸುತ್ತದೆ. ಕಾನೂನು ಉಲ್ಲಂಘಿಸುವ ವ್ಯಕ್ತಿಗಳ ಸಂಖ್ಯೆ ಹೆಚ್ಚಾದಂತೆ , ಈ ದಂಡವು ಹೆಚ್ಚಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












