ಸನ್ಮಾರ್ಗ ವಾರ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಯಲ್ಲಿ ನಡೆದ ಲಾಠಿಚಾರ್ಜ್ ನ್ನು ವಿರೋಧಿಸಿ ಪಿಎಫ್ಐ ಶುಕ್ರವಾರ ಮಧ್ಯಾಹ್ನ ಮಂಗಳೂರಲ್ಲಿ ಬೃಹತ್ ಎಸ್ಪಿ ಚಲೋ ಎಂಬ ರ್ಯಾಲಿ ನಡೆಸುತ್ತೇವೆ ಎಂದು ಘೋಷಿಸಿತ್ತು. ಆದರೆ ರ್ಯಾಲಿಗೆ ಅವಕಾಶ ಇಲ್ಲ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ಚಲೋ (ರ್ಯಾಲಿ) ನಡೆಸಲಾಗುವುದು ಎಂದು ಪಿಎಫ್ಐ ನಿನ್ನೆ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ತಿಳಿಸಿತ್ತು.
ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಶುಕ್ರವಾರ ಪಿಎಫ್ ಐ ರ್ಯಾಲಿಗೆ ಅವಕಾಶವಿಲ್ಲ ಎಂದಿದ್ದಾರೆ.
ಮಂಗಳೂರು ನಗರ ಪೊಲೀಸ್ ಇಲಾಖೆಯು ರ್ಯಾಲಿ ನಡೆಸಲು ಅವಕಾಶ ಕೊಟ್ಟಿಲ್ಲ. ಆದರೆ ಪ್ರತಿಭಟನೆ ನಡೆಸಲು ನಿರ್ಬಂಧ ವಿಧಿಸಿಲ್ಲ. ಹೀಗಾಗಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಇರುವ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.












