ಸನ್ಮಾರ್ಗ ವಾರ್ತೆ
ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡೆ ರೈತರಿಗೆ ಆನ್ಯಯ ಮಾಡುತ್ತಿರುವುದು ಅತ್ಯಂತ ಖಂಡನಿಯ, ರೈತರ ಫಲವತ್ತಾದ ಭೂಮಿ ಬಲವಂತ ದಿಂದ ಭೂಸ್ವಾಧೀನ ಸರ್ಕಾರ ಕೂಡಲೇ ಕೈಬಿಡಬೇಕೆಂದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ವಕೀಲರು ತಾಹೇರ್ ಹುಸೇನ್ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ವಿವಿಧ ಸಂಘಟನೆಗಳು ಪ್ರಗತಿಪರ ಚಿಂತಕರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ಕ್ಕೆ ವೆಲ್ಫೇರ್ ಪಾರ್ಟಿ ವತಿಯಿಂದ ಬೆಂಬಲ ಸೋಚಿಸುತ್ತ ಅವರು ಮಾತನಾಡಿದರು, ಈ ಹಿಂದೆ ಬಿಜೆಪಿ ಸರ್ಕಾರ ದೇವನಹಳ್ಳಿಯ ವ್ಯಾಪ್ತಿಯ ರೈತರ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದಾಗ ರೈತ ಹೋರಾಟ ಆರಂಭವಾಗಿತು. ಪ್ರತಿಭಟನೆನಿರತ ರೈತರನ್ನು ಭೇಟಿ ನೀಡಿದ ಅಂದಿನ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಎರಡೂವರೆ ವರ್ಷ ಪೂರೈಸಿದರೂ ಭರವಸೆ ಈಡೇರಿಸಿಲ್ಲ. ಇದರ ನಡುವೆ ಭೂ ಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಹೋರಾಟದ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ? ಈ ಸರ್ಕಾರಕ್ಕೆ ಕಿವಿಯಿದ್ದು ಕಿವುಡರಂತೆ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದೆ.
ನಮ್ಮ ಭೂಮಿ, ನಮ್ಮ ಹಕ್ಕು ಅಲ್ಲವೇ. ಸರ್ಕಾರದ ಕೈಗಾರಿಕಾ ನೀತಿ ಬದಲಾಗಬೇಕು. ದೇವನಹಳ್ಳಿಯ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರು ನಮಗೆ ಪರ್ಯಾಯವಾಗಿ ಭೂಮಿ ಕೊಡಿ ಎಂದು ಅರ್ಜಿ ಸಲ್ಲಿಸಿದರೂ, ಇದುವರಿಗೂ ಭೂಮಿ ಹಂಚಿಕೆ ಮಾಡಿಲ್ಲ. ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಏಜೆಂಟರಂತೆ ವರ್ತನೆ ಮಾಡಿದೆ.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಜಮೀನನ್ನು ಸರ್ಕಾರ ಭೂಸ್ವಾಧೀನಕ್ಕೆ ಮುಂದಾಗಿದೆ. ಭೂಸ್ವಾಧೀನದ ಪ್ರಕ್ರಿಯೆ ವಿರುದ್ಧ ರೈತರು 1,184 ದಿನ ಶಾಂತಿಯುತವಾಗಿ ಹೋರಾಟ ಮಾಡಿದ್ದಾರೆ. ದೇಶಕ್ಕೆ ಅನ್ನ ನೀಡುವ ರೈತರ ಸಮಸ್ಯೆ ಪರಿಹಾರಕ್ಕೆ ಮುಂದಾಗದ ಸರ್ಕಾರವು, ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಧಂಧೆಕೋರರು, ಕಾರ್ಪೋರೇಟ್ ಕಂಪನಿಗಳಿಗೆ ಮಾರಾಟ ಮಾಡಲು ಹುನ್ನಾರ ಮಾಡಿದೆ. ಕೃಷಿ ಭೂಮಿಯನ್ನು ಕಳೆದುಕೊಂಡರೆ, ರೈತರ ಪರಿಸ್ಥಿತಿ ಏನು’ ಎಂದು ಪ್ರಶ್ನಿಸಿದರು.
ಕೃಷಿ ಆಧಾರಿತ ಕೈಗಾರಿಕೆಗಳು ಆರಂಭ ಆಗಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ ಮಾತಾಡಲ್ಲ. ಭೂಮಿ ನೀಡಿದ ರೈತರಿಗೆ ಪರ್ಯಾಯವಾಗಿ ಭೂಮಿ ನೀಡುವ ಬಗ್ಗೆ ಮಾತಾಡದೇ, ಏಕಾಏಕಿ ರೈತರ ಭೂಮಿಗಳು ಭೂಸ್ವಾಧೀನ ಮಾಡಿಕೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದರು.
ಭೂಮಿ ಕೊಡಿ ಎಂದು ಅರ್ಜಿ ಸಲ್ಲಿಸುವ ರೈತರ ಕೂಗು ಸರ್ಕಾರಕ್ಕೆ ಕೇಳುವುದಿಲ್ಲ. ಆದರೆ ಕಾರ್ಪೋರೇಟ್ ಕಂಪನಿಗಳು, ಮಾಲ್ಗಳು, ಶ್ರೀಮಂತರ ಕೈಗಾರಿಕಾ ಪ್ರದೇಶಕ್ಕಾಗಿ ಕೆಐಎಡಿಬಿ ಮೂಲಕ ರೈತರ ಭೂಮಿ ಭೂಸ್ವಾಧೀನ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












