ವಿಮೆನ್ ಇಂಡಿಯಾ ಮೂವ್ಮೆಂಟ್‌ ವತಿಯಿಂದ ಮಹಿಳಾ ದಿನಾಚರಣೆ

0
244

ಸನ್ಮಾರ್ಗ ವಾರ್ತೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಹಲವಾರು ಪ್ರದೇಶಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿತು.

“ಮೌನವಲ್ಲ; ಹೋರಾಟ – ಮಹಿಳೆಯರಿಗೆ ನ್ಯಾಯ” ಎಂಬ ಘೋಷಣೆಯೊಂದಿಗೆ ಈ ವರ್ಷದ ಮಹಿಳಾ ದಿನಾಚರಣೆಯನ್ನು ವಿವಿಧ ಸಾಮಾಜಿಕ ಚಟುವಟಿಕೆಗಳ ಮೂಲಕ ಬಹಳ ವಿಜೃಂಭಣೆಯಿಂದ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಹಿರಿಯರನ್ನು ಗೌರವಿಸುವುದು, ಸಮಾಜಕ್ಕೆ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸುವುದು, ಸೌಹಾರ್ದ ಇಫ್ತಾರ್ ಕೂಟಗಳನ್ನು ಆಯೋಜಿಸುವುದು, ಹಾಗೂ ಮಹಿಳೆಯರ ಹಕ್ಕುಗಳು, ಗೌರವ ಮತ್ತು ಸುರಕ್ಷತೆ ಕುರಿತಾಗಿ ವಿಚಾರ ಸಂಕಿರಣಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕಾರ್ಯಕ್ರಮಗಳು ಸಮೃದ್ಧವಾಗಿ ನೆರವೇರಿಸಲಾಯಿತು.

ಈ ಕಾರ್ಯಕ್ರಮಗಳ ಮೂಲಕ ಮಹಿಳೆಯರ ಮೇಲೆ ನಡೆಯುವ ಅನ್ಯಾಯಗಳ ವಿರುದ್ಧ ಸಮಾಜ ಜಾಗೃತವಾಗಬೇಕು ಹಾಗೂ ಮಹಿಳೆಯರಿಗೆ ನ್ಯಾಯ, ಗೌರವ ಮತ್ತು ಸಮಾನ ಅವಕಾಶಗಳು ದೊರಕುವ ಸಮಾಜ ನಿರ್ಮಾಣವಾಗಬೇಕು ಎಂಬ ಸಂದೇಶವನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಹಂಚಿಕೊಂಡಿತು.

ಮಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಈ ಕಾರ್ಯಕ್ರಮಗಳಿಗೆ ಸಂಘಟನೆಯ ಪದಾಧಿಕಾರಿಗಳು, ಸಮಾಜಮುಖಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.