ವೈದ್ಯಕೀಯ-ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ: ವೆಲ್ಫೇರ್ ಪಾರ್ಟಿ ಖಂಡನೆ

0
185

ಸನ್ಮಾರ್ಗ ವಾರ್ತೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಶುಲ್ಕ ಶೇ.15 ರಷ್ಟು, ಆಡಳಿತ ಮಂಡಳಿ ಕೋಟಾ(ಖಾಸಗಿ ) ಸೀಟುಗಳ ಶುಲ್ಕ ಶೇ 25ರಷ್ಟು ಏರಿಸಿರುವ ಕ್ರಮಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿದ ಅವರು, ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ಈ ಕುರಿತ ಒಪ್ಪಂದಕ್ಕೆ ಸಹಿ ಮಾಡಿದ ನಂತರ, ರಾಜ್ಯ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಈ ನಿರ್ಧಾರದ ಪರಿಣಾಮ, 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ₹1,28,746, ಖಾಸಗಿ ಕೋಟಾದ ಸೀಟುಗಳ ಶುಲ್ಕ₹ 9,81,956ಕ್ಕೆ ಏರಿದೆ.

ದಂತ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕದ ಮೊತ್ತ ಕ್ರಮವಾಗಿ ₹83,356 ಹಾಗೂ ₹6,66,023ಕ್ಕೆ ಏರಿಸಲಾಗಿದೆ. ರಾಜ್ಯದಲ್ಲಿನ ಬಹುತೇಕ ವೈದ್ಯಕೀಯ ಕಾಲೇಜುಗಳು ರಾಜಕಾರಣಿಗಳಿಗೆ ಸೇರಿವೆ. ಅಂತಹ ಕಾಲೇಜುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರಬಹುದು’ ಎಂದು ಅವರು ತಾಹೀರ್ ಹುಸೇನ್ ದೂರಿದರು.