ನಾಳೆ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

0
466

ಸನ್ಮಾರ್ಗ ವಾರ್ತೆ

ಬೆಂಗಳೂರು,ಆ.19: ಕರ್ನಾಟಕದಲ್ಲಿ ಬಿಜೆಪಿ ಸರಕಾರದ ಸಚಿವರ ಪ್ರಮಾಣವಚನ ಕಾರ್ಯಕ್ರಮ ಮಂಗಳವಾರ ನಡೆಯಲಿದ್ದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ ಮೂರು ವಾರಗಳ ಬಳಿಕ ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಶನಿವಾರ ಸಂಜೆ ಯಡಿಯೂರಪ್ಪರೊಂದಿಗೆ ಚರ್ಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಚಿವರ ಪಟ್ಟಿಗೆ ಅಂಗೀಕಾರ ನೀಡಿದ್ದಾರೆ.

ಮಂಗಳವಾರ ಬೆಳಗ್ಗೆ ಹತ್ತು ಗಂಟೆಗೆ ವಿಧಾನಸೌಧದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮಧ್ಯಾಹ್ನದ ಬಳಿಕ ಸಚಿವರ ಪ್ರಮಾಣ ವಚನ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಜುಲೈ 26ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರು.ಸಚಿವರ ಅಂತಿಮ ಪಟ್ಟಿಯನ್ನು ಈವರೆಗೂ ಬಹಿರಂಗೊಳಿಸಲಾಗಿಲ್ಲ.